ದಾವಣಗೆರೆ : ಜ. 19 ರಂದು ನಗರದಕ್ಕೆ ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಆಗಮಿಸಲಿದ್ದಾರೆ.
ನಾಳೆ ಬೆಳಿಗ್ಗೆ 11-00 ಗಂಟೆಗೆ ನಗರದ ಶಾಮನೂರು ರಸ್ತೆಯ ಬಾಪೂಜಿ ಅತಿಥಿಗೃಹದಲ್ಲಿ ಸಭೆ ನಡೆಸಲಿದ್ದಾರೆ. ಜ.20ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ರಾಜಭವನ ಚಲೋ ಕುರಿತು ಮಾಜಿ ಸಚಿವರು, ಹಾಲಿ-ಮಾಜಿ ಶಾಸಕರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ತಿಳಿಸಿದ್ದಾರೆ.
ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪನವರು ವಹಿಸಲಿದ್ದಾರೆ. ಈ ಸಭೆಗೆ ಪಕ್ಷದ ವಿವಿಧ ಘಟಕಗಳಾದ ಎನ್‍ಎಸ್‍ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಾರ್ಮಿಕ ವಿಭಾಗ, ಪರಿಶಿಷ್ಟ ಜಾತಿ, ಪಂಗಡ, ಓ.ಬಿ.ಸಿ. ವಿಭಾಗದ ಎಲ್ಲಾ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ, ಎಪಿಎಂಸಿ ಸದಸ್ಯರುಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಮಾಸ್ಕ್ ಧರಿಸಿ ಅಂತರ ಕಾಪಾಡಿಕೊಂಡು ಭಾಗವಹಿಸಬೇಕೆಂದು ತಿಳಿಸಲಾಗಿದೆ.



