Connect with us

Dvgsuddi Kannada | online news portal | Kannada news online

ಬೆಸ್ಕಾಂನಲ್ಲಿ ಅಪ್ರೆಂಟಿಸ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಬೆಸ್ಕಾಂನಲ್ಲಿ ಅಪ್ರೆಂಟಿಸ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತದಲ್ಲಿ (ಬೆಸ್ಕಾಂ) ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಜಿ ಆಹ್ವಾನ ನೀಡಿದೆ. ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸಬಹುದು. ಬೆಸ್ಕಾಂ ತರಬೇತಿ ಪಡೆಯುವ ಅಭ್ಯರ್ಥಿಗಳು ತಮ್ಮ ಮುಖ್ಯ ದಾಖಲೆಗಳನ್ನು ಇಲ್ಲಿ ಸಲ್ಲಿಸಬೇಕು.

ಹುದ್ದೆಗಳ ವಿವರ:  ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325 ಹುದ್ದೆಗಳಿಗೆ ಅವಕಾಶ ಇದೆ.  ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌- 143, ಎಲೆಕ್ಟ್ರಾನಿಕ್ಸ್‌ ಆಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌- 116, ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಎಂಜಿನಿಯರಿಂಗ್‌-36, ಇನ್‌ಫಾರ್ಮೆಷನ್‌ ಸೈನ್ಸ್‌ ಆಂಡ್‌ ಎಂಜಿನಿಯರಿಂಗ್‌-20, ಸಿವಿಲ್‌ ಎಂಜಿನಿಯರಿಂಗ್‌-05, ಇನ್‌ಸ್ಟ್ರುಮೆಂಟೇಷನ್‌ ಟೆಕ್ನಾಲಜಿ ಎಂಜಿನಿಯರಿಂಗ್‌-5 . ಈ  ತರಬೇತಿ 1ವರ್ಷಕ್ಕೆ ಮಾತ್ರ ಈ ಹುದ್ದೆಯನ್ನು ಮಿತಿಗೊಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9008 ರೂ. ಸ್ಟೈಫೆಂಡ್‌ ನೀಡಲಾಗುತ್ತದೆ.

ಟೆಕ್ನಿಷಿಯನ್‌ (ಡಿಪ್ಲೊಮಾ) ಅಪ್ರೆಂಟಿಸ್‌ಶಿಪ್‌ 75 ಹುದ್ದೆ:  ಎಲೆಕ್ಟ್ರಿಲ್‌ ಆಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌- 55, ಎಲೆಕ್ಟ್ರಾನಿಕ್ಸ್‌ ಆಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌-10,  ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಎಂಜಿನಿಯರಿಂಗ್‌-10  ಹುದ್ದೆಗಳಿವೆ.

ವಿದ್ಯಾರ್ಹತೆ: ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ ಹುದ್ದೆಗಳಿಗೆ ಬಿಇ/ಬಿಟೆ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್‌ಶಿಪ್‌ಗೆ ಸರಕಾರದ ಅಂಗೀಕೃತ ಪಾಲಿಟೆಕ್ನಿಕ್‌ಗಳಿಂದ ಮೂರು ವರ್ಷದ ಡಿಪ್ಲೊಮಾ ಓದಿರಬೇಕು. 2020, 2021, 2022ರಲ್ಲಿ ಪದವಿ/ಡಿಪ್ಲೊಮಾ ಪೂರೈಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಅಅಂದರೆ, 2019ರ ನಂತರ ಸಂಬಂಧಪಟ್ಟ ಪದವಿ/ಡಿಪ್ಲೊಮಾ ಉತ್ತೀರ್ಣರಾದವರು ಮಾತ್ರ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಕ್ಟೋಬರ್‌ 31ರ ಮೊದಲು ಅರ್ಜಿ ಸಲ್ಲಿಸಬೇಕು. ಅಂದರೆ, ಎನ್‌ಎಟಿಎಸ್‌ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಲು ಅಕ್ಟೋಬರ್‌ 31 ಕೊನೆಯ ದಿನಾಂಕವಾಗಿದೆ. ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್‌ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್‌ 7 ಕೊನೆಯ ದಿನಾಂಕವಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top