ಬೆಳಗಾವಿ: ಸಿಎಂ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಶೀಘ್ರವೇ ಉಚ್ಚಾಟಿಸಲಾಗುವುದು ಎಂದು ಬಿಜೆಪಿ ರಾಜ್ಯ ಅರುಣ್ ಸಿಂಗ್ ಹೇಳಿದ್ದಾರೆ.
ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದರೂ, ಶಾಸಕ ಬಸನಗೌಡ ಯತ್ನಾಳ್ ಅವರು ತಮ್ಮದೇ ಸರ್ಕಾರದ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲಿಯೇ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗುವುದು. ಯತ್ನಾಳ್ ಬಗ್ಗೆ ಈಗ ಏನನ್ನು ಮಾತನಾಡುವುದಿಲ್ಲ. ಆ ವ್ಯಕ್ತಿ ಬಗ್ಗೆ ಮಾತನಾಡಿದರೆ ಆತನನಿಗೆ ಮಹತ್ವ ಕೊಟ್ಟಂತಾಗುತ್ತದೆ ಎಂದರು.
ಶಾಸಕ ಯತ್ನಾಳ್ ಮೇಲೆ ಬಿಜೆಪಿಗೆ ಯಾವುದೇ ನಂಬಿಕೆ ಇಲ್ಲ. ಅವರಿಗೆ ಈಗಾಗಲೇ ನೋಟೀಸ್ ನೀಡಲಾಗಿದೆ. ಎಚ್ಚರಿಕೆ ನೀಡಿದ್ದರೂ ಪಕ್ಷಕ್ಕೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಶ್ರೀಘ್ರವೇ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತೇವೆ ಎಂದರು.



