Connect with us

Dvgsuddi Kannada | online news portal | Kannada news online

BPL ಕಾರ್ಡ್ ನಿಯಮದಲ್ಲಿ ಯಾವುದೇ ಹೊಸ ಬದಲಾವಣೆ ಇಲ್ಲ; ಈ ಹಿಂದೆ ಇದ್ದ ನಿಯಮಗಳೇ ಜಾರಿ : ಉಮೇಶ್ ಕತ್ತಿ

ಪ್ರಮುಖ ಸುದ್ದಿ

BPL ಕಾರ್ಡ್ ನಿಯಮದಲ್ಲಿ ಯಾವುದೇ ಹೊಸ ಬದಲಾವಣೆ ಇಲ್ಲ; ಈ ಹಿಂದೆ ಇದ್ದ ನಿಯಮಗಳೇ ಜಾರಿ : ಉಮೇಶ್ ಕತ್ತಿ

ಬೆಂಗಳೂರುಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್  ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ, ಸಾರ್ವಜನಿಕರ ವಿರೋಧಕ್ಕೆ ಮಣಿದಿದ್ದಾರೆ. ಯಾವುದೇ ಹೊಸ ನಿಯಮ ಜಾರಿ ಇಲ್ಲ. ಹಿಂದೆ ಇದ್ದ ನಿಯಮಗಳೇ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.  5 ಎಕರೆಗಿಂತ ಹೆಚ್ಚು ಜಮೀನು, ಬೈಕ್, ಟಿವಿ ಫ್ರಿಡ್ಜ್ ಹೊಂದಿವರಿಗಿಲ್ಲ BPL ಕಾರ್ಡ್; ಮಾ.31 ಕೊನೆಯ ಗಡುವು..!

ನಾನು ಸಚಿವನಾದ ನಂತರ ಯಾವುದೇ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಬಿಪಿಎಲ್ ಗೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್‌ಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು. LPG ಸಿಲಿಂಡರ್ ದರ ಏರಿಕೆ ಶಾಕ್: ಮತ್ತೆ 50 ರೂಪಾಯಿ ಹೆಚ್ಚಿಸಿದ ಸರ್ಕಾರ…!

ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷ ರೂಗಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ಹಿಂಪಡೆಯುತ್ತದೆ. ಏಪ್ರಿಲ್ ಬಳಿಕ ಸರ್ಕಾರ ಬಿಪಿಎಲ್ ಕಾರ್ಡುದಾರರ ಪರಿಶೀಲನೆ ನಡೆಸಲಿದೆ. ಒಂದು ವೇಳೆ ಈ ಎಲ್ಲ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top