ಹಾಸನ: ಜಿಲ್ಲೆಯ ಹೊಳೆನರಸೀಪು ತಾಲೂಕಿನ ಬಳಿಯ ಕಾಮಸಮುದ್ರದ ಬಳಿಯಲ್ಲಿ ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಡಿಕ್ಕಿಯಾದ ರಬಸಕ್ಕೆ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರು ಮತ್ತು ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.