ಬೆಳಗಾವಿ: ಸಿಡಿ ಪ್ರಕಣದಲ್ಲಿ ನಾನು ಮೌನವಾಗಿಲ್ಲ, ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು,ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರಕರಣವನ್ನು ಸರಿಯಾದ ನಿಭಾಯಿಸುತ್ತಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ. ಕಾನೂನು ವ್ಯಾಪ್ತಿಯಲ್ಲಿ ನೂರಕ್ಕೆ ನೂರಷ್ಟು ತನಿಖೆ ನಡೆಯಲಿದೆ. ತನಿಖೆ ಮೇಲೆ ಅನುಮಾನ ಬೇಡ. ಇನ್ನೂ ಯಾರದ್ದೇ ಸಿಡಿ ಇದ್ದರೂ ಬಿಡುಗಡೆ ಮಾಡಲಿ ಎಂದು ತಿಳಿಸಿದರು.



