ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಬಳಿಯ ಸ್ಪೋಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದರು. ಘಟನೆಯಲ್ಲಿ 06 ಜನ ಮೃತಪಟ್ಟಿದ್ದಾರೆ. ಘಟನೆ ಸಂಪೂರ್ಣ ಮಾಹಿತಿ ಪಡೆದು, ಮೃತ ಪಟ್ಟವರ ಆತ್ಮಕ್ಕೆ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಬಳಿಕ ಮಾತನಾಡಿ ಸಚಿವರು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ತಿಖೆಯನ್ನು ಸಿಐಡಿಗೆ ವಹಿಸಿದ್ದೇನೆ. ತನಿಖಾ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ. ನನ್ನ ಇಲಾಖೆಯಿಂದಲೇ ತನಿಖೆ, ಕ್ರಮ ಆರಂಭಿಸುತ್ತೇನೆ ಎಂದು ಖಡಕ್ ಹೇಳಿಕೆ ನೀಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಕ್ವಾರಿಯ 3 ಮಾಲೀಕರನ್ನು ತಕ್ಷಣ ಬಂಧಿಸಿ ತನಿಖೆ ನಡೆಸಲು ಗೃಹ ಸಚಿವರು ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.



