Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್; ಮಣಿಪಾಲ್  ಆಸ್ಪತ್ರೆಗೆ ದಾಖಲು

ಪ್ರಮುಖ ಸುದ್ದಿ

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್; ಮಣಿಪಾಲ್  ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ  ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಡಿಯೂರಪ್ಪ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ನಂತರ ಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.  ಈ ಬಗ್ಗೆ ಸಿಎಂ ಸ್ವತಃ ಟ್ವಿಟ್ ಮಾಡಿದ್ದು, ಜ್ವರದ ಹಿನ್ನೆಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ.

ಇಂದು ಬೆಳಿಗ್ಗೆ ಸಿಎಂ  ಅಧಿಕಾರಿಗಳು, ತಜ್ಞರ ಜೊತೆ ತುರ್ತು ಸಭೆ ನಡೆಸಿದ್ದರು. ಸಭೆ ನಡೆದ ಕೆಲವೇ ಗಂಟೆಗಳ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಬೆಳಗಾವಿ ಪ್ರವಾಸದಲ್ಲಿದ್ದ ಯಡಿಯೂರಪ್ಪ ಅವರಲ್ಲಿ ಮಧ್ಯಾಹ್ನದ ಹೊತ್ತಿಗೆ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿ, ವಿಶ್ರಾಂತಿ ಪಡೆದುಕೊಳ್ಳಲು ಸಲಹೆ ನೀಡಿದ್ದರು. ಈಗಾಗಲೇ ಮೊದಲ ಬಾರಿ ಕೊರೊನಾ ಬಂದು, ಗುಣಮುಖರಾಗಿದ್ದರು. ಇದೀಗ ಎರಡನೇ ಬಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top