Connect with us

Dvgsuddi Kannada | online news portal | Kannada news online

18 ವರ್ಷ ಮೇಲ್ಪಟ್ಟವರಿಗೆ ನಾಳೆ ಕೊರೊನಾ ಲಸಿಕೆ ನೀಡುತ್ತಿಲ್ಲ; ಯಾರು ಲಸಿಕಾ ಕೇಂದ್ರ ಕಡೆ ಬರಬೇಡಿ; ಸಚಿವ ಸುಧಾಕರ್

ಪ್ರಮುಖ ಸುದ್ದಿ

18 ವರ್ಷ ಮೇಲ್ಪಟ್ಟವರಿಗೆ ನಾಳೆ ಕೊರೊನಾ ಲಸಿಕೆ ನೀಡುತ್ತಿಲ್ಲ; ಯಾರು ಲಸಿಕಾ ಕೇಂದ್ರ ಕಡೆ ಬರಬೇಡಿ; ಸಚಿವ ಸುಧಾಕರ್

ಬೆಂಗಳೂರು: ಕೇಂದ್ರ ಸರ್ಕಾರ ಹೇಳಿದಂತೆ ಮೇ 1ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಸಾಮೂಹಿಕ ಕೊರೋನಾ ಲಸಿಕೆ ಅಭಿಯಾನವನ್ನು ಆರಂಭಿಸಲು ಸಾಧ್ಯವಾಗುತ್ತಿಲ್ಲ. ಯಾರೂ ಆಸ್ಪತ್ರೆಗಳಿಗಾಗಲಿ,  ಲಸಿಕಾ ಕೇಂದ್ರಕ್ಕೆ ಆಗಲಿ ಬರಬೇಡಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಮೇ 1ರಿಂದ 18 ರಿಂದ 45 ವರ್ಷದವರಿಗೆ ಲಸಿಕೆ  ಅಭಿಯಾನ ಆರಂಭವಾಗಬೇಕಿತ್ತು. ಆದರೆ,  ಕರ್ನಾಟಕ ರಾಜ್ಯದಲ್ಲಿ 3ರಿಂದ 3.5 ಕೋಟಿ ಜನರು ಫಲಾನುಭವಿಗಳು ಇದ್ದಾರೆ ಎಂದು ಅಂದಾಜು ಮಾಡಿದ್ದೇವೆ. ಈಗಾಗಲೇ ಸರ್ಕಾರ 400 ಕೋಟಿ ರೂಪಾಯಿಗಳನ್ನು ಲಸಿಕೆ ತಯಾರಿಕಾ ಕಂಪೆನಿ ಸೆರಂ ಇನ್ಸ್ಟಿಟ್ಯೂಟ್ ಗೆ ನೀಡಿ 1 ಕೋಟಿ ಡೋಸ್ ಗೆ ಆರ್ಡರ್ ನೀಡಿದೆ. ಭಾರತ್ ಬಯೋಟೆಕ್ ಕಂಪೆನಿ, ರಷ್ಯಾ ಮೂಲದ ಕಂಪೆನಿಯನ್ನು ಸಹ ಸಂಪರ್ಕಿಸಿದ್ದು ಅವರಿಂದ ಅಧಿಕೃತವಾಗಿ ಮಾಹಿತಿ ಬಂದಿಲ್ಲ ಎಂದು ಹೇಳಿದರು.

ಕಂಪೆನಿ ಕಡೆಯಿಂದ ಯಾವಾಗ ಲಸಿಕೆ ಬರುತ್ತದೆ ಎಂದು ಸರ್ಕಾರಕ್ಕೆ ಅಂದಾಜು ಮಾಡಲು ಸಾಧ್ಯವಿಲ್ಲ.ಆದ್ದರಿಂದ ಎಷ್ಟು ವಾರಗಳಾಗಬಹುದು ಎಂದು ನಾನು ಹೇಳುವುದಿಲ್ಲ. ಆದಷ್ಟು ಶೀಘ್ರ ಲಸಿಕೆ ತರಿಸುವ ಸರ್ಕಾರದ ಪ್ರಯತ್ನ ಮುಂದುವರಿಯುತ್ತಿದೆ. ಕಂಪೆನಿ ಮೇಲೆ ಒತ್ತಡ ಹೇರಿ ಆದಷ್ಟು ಬೇಗ ಲಸಿಕೆ ತರಿಸುವುದು ಸರ್ಕಾರದ ಧ್ಯೇಯ ಕೂಡ ಆಗಿದೆ ಎಂದರು.

18 ವರ್ಷದಿಂದ 44 ವರ್ಷದೊಳಗಿನವರಿಗೆ ರಾಜ್ಯದ ಜನತೆಗೆ ಸರ್ಕಾರ ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡುವುದು ಖಂಡಿತ. ಇದರಲ್ಲಿ ಯಾವುದೇ ಗೊಂದಲ ಬೇಡ. ಕೋವಿಡ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿಸಬಹುದು. ಅದೇ ರೀತಿ 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳದವರು ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಿ ಎಂದರು.

ಸೆರಂ ಸಂಸ್ಥೆಯಿಂದ ಖಚಿತ ಮಾಹಿತಿ ಬಂದ ಕೂಡಲೇ ನಾವೇ ರಾಜ್ಯದ ಜನತೆಗೆ 18 ವರ್ಷ ಮೇಲ್ಪಟ್ಟವರಿಗೆ ಯಾವಾಗ ಲಸಿಕೆ ಅಭಿಯಾನ ಆರಂಭವಾಗುತ್ತದೆ ಎಂದು ತಿಳಿಸುತ್ತೇವೆ.  ಕರ್ನಾಟಕಕ್ಕೆ 99 ಲಕ್ಷ ಡೋಸ್ ಲಸಿಕೆಗಳು ಬಂದಿದ್ದು, 95 ಲಕ್ಷ ಡೋಸ್ ಲಸಿಕೆಗಳನ್ನು ಜನರಿಗೆ ನೀಡಿದ್ದೇವೆ. ಕೇಂದ್ರ ಸರ್ಕಾರ ಜೊತೆ ಕೂಡ ದಿನನಿತ್ಯ ಲಸಿಕೆಗಳನ್ನು ಬೇಗನೆ ಪೂರೈಸುವಂತೆ ಮನವಿ ಮಾಡಿಕೊಳ್ಳುತ್ತೇವೆ. ಸರ್ಕಾರದ ವ್ಯವಸ್ಥೆಗಳಲ್ಲಿ ಲೋಪದೋಷಗಳಾಗಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ನಾಗರಿಕರು ಕೋವಿಡ್ ಮಾರ್ಗಸೂಚಿಗಳನ್ನು ಶಿಸ್ತುಬದ್ಧವಾಗಿ ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top