ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಯಲ್ಲಿ ಡಿ ಗ್ರೂಪ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ಇದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಡಿ ಗ್ರೂಪ್ ಹುದ್ದೆ ಭರ್ತಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅವಕಾಶವಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಬಹುದು. ಅವರಿಗೆ ವೇತನವನ್ನು ಸರ್ಕಾರದಿಂದ ನೀಡದೆ, ಎಸ್ ಎಫ್ ಸಿ ಅಡಿಯಲ್ಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕಲ್ಯಾಣ ಕರ್ನಾಟಕದ ನೀರು ಸರಬರಾಜು ಅಪರೇಟರ್ ಮತ್ತು ಸಹಾಯಕ ನೀರು ಸರಬರಾಜು ಅಪರೇಟರ್ ನೇರ ನೇಮಕ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.



