ದಾವಣಗೆರೆ: ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಇಂದು (ಫೆ.8) ಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಸ್ವತಃ ಲಸಿಕೆ ಪಡೆದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸಹ ಲಸಿಕೆ ಪಡೆದರು.

ಮೊದಲನೇ ಹಂತದ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿದ್ದು, ಎರಡನೇ ಹಂತದ ಲಸಿಕೆ ಕಾರ್ಯಕ್ರಮ ಆರಂಭವಾಗಿದೆ. ಈ ಅಭಿಯಾನ ಮೂರು ದಿನಗಳ ಕಾಲ ನಡೆಯಲಿದ್ದು, ಈ ಹಂತದಲ್ಲಿ ಪೊಲೀಸ್ ಇಲಾಖೆ, ಪಂಚಾಯಿತ್ ರಾಜ್ ಅಡಿಯಲ್ಲಿ ಬರುವ ಸ್ಥಳೀಯ ಆಡಳಿತ ಸಂಸ್ಥೆಗಳು, ನಗರ ಸ್ಥಳೀಯ ಆಡಳಿತ ಸಂಸ್ಥೆಗಳು, ಅಗ್ನಿಶಾಮಕದಳ, ಹೋಂಗಾಡ್ರ್ಸ್‍ಗಳಿಗೆ ನೀಡಲಾಗುತ್ತದೆ.



