ದಾವಣಗೆರೆ: ಬೆಳಗಾವಿ ಬಗ್ಗೆ ಮಹಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಅವಿವೇಕತನದಿಂದ ಕೂಡಿದ್ದು, ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿ ಆಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ನಿಪ್ಪಾಣಿ ರಾಜ್ಯದ ಅವಿಭಾಜ್ಯ ಅಂಗಗಳು. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಠಾಕ್ರೆ ಹೇಳಿಕೆ ರಾಜಕೀಯ ಪ್ರೇರಿತ. ಅವರು ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ.
ಅನೇಕ ವರ್ಷಗಳ ಹಿಂದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ತೀರ್ಮನಾನವಾಗಿದ್ದು, ರಾಜ್ಯದ ಅವಿಭಾಜ್ಯ ಅಂಗವಾಗಿದೆ. ಇಂತಹ ಗೊಂದಲ ತರುವಂತಹ ಹೇಳಿಕೆ ಒಂದು ರಾಜ್ಯದ ಮುಖ್ಯಮಂತ್ರಿಯಾದ ಉದ್ಧವ್ ಠಾಕ್ರೆಗೆ ಶೋಭೆ ತರುವಂತಹದಲ್ಲ.ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿಗಳು ಬಂದು ಹೇಳಿದರೂ ಬೆಳಗಾವಿ, ನಿಪ್ಪಾಣಿ ಕರ್ನಾಟದಲ್ಲೇ ಇರುತ್ತದೆ ಎಂದು ಕಿಡಿಕಾರಿದರು.



