Connect with us

Dvgsuddi Kannada | online news portal | Kannada news online

ದಾವಣಗೆರೆ: ಜ.18 ರಂದು ಹೈಟೆಕ್  KSRTC ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ; ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ

ದಾವಣಗೆರೆ

ದಾವಣಗೆರೆ: ಜ.18 ರಂದು ಹೈಟೆಕ್  KSRTC ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ; ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದಿಂದ ಜ.18 ರಂದು ಬೆಳಿಗ್ಗೆ 10ಕ್ಕೆ ಕೇಂದ್ರ ಬಸ್ ನಿಲ್ದಾಣದಲ್ಲಿ  ಹೈಟೆಕ್ ನಿಲ್ದಾಣಕ್ಕೆ  ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸುವರು. ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ ಶಂಕುಸ್ಥಾಪನೆ ನೆರೆವೇರಿಸುವರುನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡುವರು. 120 ಕೋಟಿ ವೆಚ್ಚದಲ್ಲಿ ಹೈಟೆಕ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ  ಮಾಡಲಾಗುತ್ತಿದೆ. ಇನ್ನೂ  ತಾತ್ಕಾಲಿಕವಾಗಿ ನಗರದ ಹೈಸ್ಕೂಲ್ ಮೈದಾನದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ಧಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

KSRTC  ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ನೂತನ ಮಾರ್ಗಗಳ ಉದ್ಘಾಟನೆಯನ್ನು ನೆರೆವೇರಿಸುವರು.ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಕೆ.ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ.ಎನ್. ಲಿಂಗಣ್ಣ, ಶಾಮನೂರು ಶಿವಶಂಕರಪ್ಪ, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಕೆಎಸ್‌ಆರ್‌ಟಿಸಿ ನಿರ್ದೇಶಕ ಶಿವಯೋಗಿ ಸಿ. ಕಳಸದ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ. ರೇಜು ಭಾಗವಹಿಸಲಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});