Connect with us

Dvgsuddi Kannada | online news portal | Kannada news online

ವಾಲ್ಮೀಕಿ ಗುರುಪೀಠ ಅಭಿವೃದ್ದಿಗೆ 10.8 ಕೋಟಿ ಅನುದಾನ ಬಿಡುಗಡೆ : ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ವಾಲ್ಮೀಕಿ ಗುರುಪೀಠ ಅಭಿವೃದ್ದಿಗೆ 10.8 ಕೋಟಿ ಅನುದಾನ ಬಿಡುಗಡೆ : ಸಿಎಂ ಯಡಿಯೂರಪ್ಪ

ದಾವಣಗೆರೆ: ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು,  ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೀಸಲಾತಿ ಹೆಚ್ಚಳ: ಮಾರ್ಚ್ 9ಕ್ಕೆ ಡೆಡ್ ಲೈನ್ ; ವಾಲ್ಮೀಕಿ ಶ್ರೀಗಳ ಸಾವಿನ ಹೇಳಿಕೆಯಿಂದ ವೇದಿಕೆಯಲ್ಲಿ ಗೊಂದಲ..!

ವಾಲ್ಮೀಕಿ ಸಮುದಾಯದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆಯಲು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಆಧ್ಯಾತ್ಮಿಕ ಚಿಂತಕ, ಶಿಕ್ಷಣ ತಜ್ಞ, ರಾಜನೀತಿ ತಜ್ಞ, ತತ್ವಜ್ಞಾನಿಯಾದ ವಾಲ್ಮೀಕಿ ಜನಮಾನಸದಲ್ಲಿ ಇಂದಿಗೂ ಇದ್ದಾರೆ. ಜಗತ್ತಿಗೆ ರಾಮಾಯಣ ಕೊಟ್ಟ ಶ್ರೇಷ್ಠ ದಾರ್ಶನಿಕ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಸಾಮಾಜಿಕ ಮೌಲ್ಯಗಳನ್ನು ರಾಮಾಯಣದಲ್ಲಿ ಪ್ರತಿಪಾದಿಸುವ ಮೂಲಕ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುತ್ತಾ ಸಮಾನ ಅವಕಾಶಗಳನ್ನು ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ.

ಕೊರೋನದಿಂದ ರಾಜ್ಯದ ಆರ್ಥಿಕ ಮಟ್ಟ ಕುಸಿದಿದ್ದು ಹಣಕಾಸಿನ ಇತಿಮಿತಿಯಲ್ಲಿಯೇ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಿದ್ದೇವೆ. ಕಳೆದ ಮೂರು ದಿನದಿಂದ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಪೂರ್ವಭಾವಿಯಾಗಿ ತೆರಿಗೆ ಸಂಗ್ರಹಣೆಯಾಗುತ್ತಿದೆ ಎಂದು ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ,  ಜಲಸಂಪನ್ಮೂಲ ಸಚಿವ ಮತ್ತು ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ರಮೇಶ್ ಲ.ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಸಂಸದರಾದ ಜಿ.ಎಂ.ಸಿದ್ದೇಶ್ವರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಎಸ್.ವಿ.ರಾಮಚಂದ್ರ, ಶಾಸಕರಾದ ಸತೀಶ ಲ.ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಡಾ.ಯತೀಂದ್ರ, ಚಿಕ್ಕಮಾದು, ರಾಜವೆಂಕಟಪ್ಪ ನಾಯಕ, ಡಿ.ಕೆ.ಶಿವಕುಮಾರ್, ನರಸಿಂಹನಾಯಕ ಉಪಸ್ಥಿತರಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});