ಉಚ್ಚoಗಿದುರ್ಗ: ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಿನ್ನೆಲೆ ಹೋಳಿ ಹುಣ್ಣಿಮೆ ದಿನದಂದು ಉಚ್ಚಂಗಿದುರ್ಗದ ಉಚ್ಚoಗೆಮ್ಮ ದೇವಿ ದರ್ಶನಕ್ಕೆ ಅವಕಾಶವಿಲ್ಲ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಧಾರ್ಮಿಕ ಪ್ರಸಿದ್ಧಿ ಹೊಂದಿರುವ ಉಚ್ಚoಗಿದುರ್ಗದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಹೋಳಿ ಹುಣ್ಣಿಮೆಯ ದಿನ ಮಾ.28 ರಂದು ಭಕ್ತರ ಪ್ರವೇಶಕ್ಕೆ ನಿಷೇಧ ಹೇರಿದೆ. ಹುಣ್ಣಿಗೆ ಸಾವಿರಾರು ಭಕ್ತರು ಉಚ್ಚoಗೆಮ್ಮನ ದರ್ಶನಕ್ಕೆ ಆಗಮಿಸುತ್ತಿದ್ದು, ಸಾರ್ವಜನಿಕ ಆರೋಗ್ಯದ ದೃಷ್ಠಿಯಿಂದ ಕೊರೊನ ನಿಯಮಗಳನ್ನು ಪಾಲಿಸುವುದು ಕಷ್ಟವಾಗುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಉಚ್ಚoಗೆಮ್ಮನ ದರ್ಶನಕ್ಕೆ ಅವಕಾಶವಿರುವುದಿಲ್ಲ ಭಕ್ತರು ಸಹಕರಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಧಾರ್ಮಿಕ ಇಲಾಖೆಯ ಆಯುಕ್ತರಾದ ಪ್ರಕಾಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.