Connect with us

Dvgsuddi Kannada | online news portal | Kannada news online

ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ 60 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ 60 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

 ಬೆಂಗಳೂರು: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಖಾಲಿ ಇರುವ 60 ಹುದ್ದೆ ಭರ್ತಿಗೆರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಖಾಲಿ ಇರುವ 60  ಗ್ರೂಪ್-ಸಿ ಸಹಾಯಕ ನಗರ ಯೋಜಕರ ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ದಿನಾಂಕ 30- 04-2022 ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 30-05-2022 ಕೊನೆಯ ದಿನವಾಗಿದೆ.

ಈ ಬಗ್ಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದ್ದು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರ ಒಟ್ಟು 60 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದಲ್ಲಿ ಹೈ. ಕರ್ನಾಕಟಕ್ಕೆ 10 ಹಾಗೂ ಉಳಿದ ಭಾಗಕ್ಕೆ 50 ಹುದ್ದೆ ನಿಗದಿ ಮಾಡಲಾಗಿದೆ.  ಈ ಹುದ್ದೆಗೆ ರೂ.33,450 ರಿಂದ ರೂ.62,600ರವರೆಗೆ ವೇತನ ನಿಗಧಿ ಮಾಡಲಾಗಿದೆ.

ವಿದ್ಯಾರ್ಹತೆ – ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರ್, ವಯೋಮಿತಿ – ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷಗಳು. ಪ್ರವರ್ಗ2ಎ, 2ಬಿ, 3ಎ, 3ಬಿಗೆ 38 ವರ್ಷ. ಪರಿಶಿಷ್ಠ ಜಾತಿ, ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು,  ಶುಲ್ಕ:ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿ, ಹಿಂದುಳಿದ ವಿದ್ಯಾರ್ಥಿಗಳಿಗೆ 300 , ಮಾಜಿ ಸೈನಿಕರಿಗೆ 50 ಹಾಗೂ ಎಸ್ ಸಿ , ಎಸ್ ಟಿ ಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಆಯ್ಕೆ ವಿಧಾನ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ  ನಡೆದಯಲಿದೆ. ಅಧಿಸೂಚನೆ ನೋಡಲು www.kpsc.kar.nic.in ಜಾಲತಾಣಕ್ಕೆ ಭೇಟಿ ನೀಡಿ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top