ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಇದರ ಹೊರತಾಗಿಯೂ ರಾಜ್ಯದ ವಿವಿಧೆಡೆ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗುತ್ತಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ವೇಳೆಗೆ ksrtc 1085, bmtc 238, neksrtc 515, nwksrtc 205 ಸೇರಿ ಒಟ್ಟು 2043 ಬಸ್ ಗಳು ನಾಲ್ಕು ನಿಗಮದಿಂದ ಚಾಲನೆಯಲ್ಲಿವೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಒಂದೆಡೆ ಸಾರಿಗೆ ನೌಕರರು ಪ್ರತಿಭಟನೆ ಕೈ ಬಿಡುತ್ತಿಲ್ಲ. ಸರ್ಕಾರ ಕೂಡ ಆರನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಿಸಲು ಒಪ್ಪುತ್ತಿಲ್ಲ. ಇಬ್ಬರ ನಡುವಿನ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಮಾತಿನಂತೆ ಸಾರ್ವಜನಿಕರಿಗೆ ಮಾತ್ರ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ.



