ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಯೋಜನೆಗೆ ನಾವು ಕೂಡ ಆಗ್ರಹಿಸುತ್ತೇವೆ. ಆದರೆ, ಕಾಂಗ್ರೆಸ್ ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೇಕೆದಾಟು ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿದೆ. ಇದಕ್ಕಾಗಿ ಅನೇಕ ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ, ನಾನು ಕೂಡ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತೇನೆ. ಆದರೆ, ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ಥಿತ್ವದಲ್ಲಿ ಇದ್ದಾಗ ಯಾಕೆ ಯೋಜನೆ ಮಾಡಲಿಲ್ಲ.? ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಲಿ, ನಾವು ಬೆಂಬಲಿಸೋದಿಲ್ಲ ಎಂದು ತಿಳಿಸಿದರು.



