ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸ ಪಾದಯಾತ್ರೆ ನಡೆಯುತ್ತಿದ್ದು, ಫೆಬ್ರವರಿ 21ರಂದು ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಕರೆ ನೀಡಲಾಗಿದೆ. ಸಮಾವೇಶ ಬಳಿಕ ಮೀಸಲಾತಿ ಘೋಷಿಸದಿದ್ದರೆ ಮಾರ್ಚ್ 4ರವರೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ. ಒಂದು ವೇಳೆ ಅದಕ್ಕೂ ರಾಜ್ಯ ಸರ್ಕಾರ ಬಗ್ಗದೇ ಹೋದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಈ ಕುರಿತಂತೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಲ್ಲಿ ಪಂಚಮಸಾಲಿ ಬೃಹತ್ ಸಮಾವೇಶಕ್ಕೆ ನಿರ್ಧರಿಸಲಾಗಿದೆ.. ಸಮಾವೇಶದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಸಮಾವೇಶದ ಬಳಿಕ ಮಾರ್ಚ್ 4ರವರೆಗೆ ಸತ್ಯಾಗ್ರಹ ನಡೆಸಲಾಗುತ್ತದೆ. ಮಾರ್ಚ್ 5ರಂದು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದರು.