Connect with us

Dvg Suddi-Kannada News

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ; ಕಾಂಗ್ರೆಸ್ ನಿಂದ ನಾಟ್ ಔಟ್ 100 ಪ್ರತಿಭಟನೆ

ಪ್ರಮುಖ ಸುದ್ದಿ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ; ಕಾಂಗ್ರೆಸ್ ನಿಂದ ನಾಟ್ ಔಟ್ 100 ಪ್ರತಿಭಟನೆ

ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪಕ್ಷದಿಂದ  ನಾಟ್ ಔಟ್ 100 ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಸರ್ಕಾರ ವಿಧಿಸುತ್ತಿರುವ ಅಬಕಾರಿ, ಮಾರಾಟ ತೆರಿಗೆಗಳನ್ನು ಶೇ.50ರಷ್ಟು ಕಡಿಮೆ ಮಾಡಬೇಕು ಎಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಬೆಂಗಳೂರಿನ ಶಿವಾನಂದ ಸರ್ಕಲ್ ನ ರೆಡ್ಡಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದರ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ  ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆ  ಐದು ದಿನಗಳ ಕಾಲ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ  ನಡೆಸುತ್ತೇವೆ. ರಾಜ್ಯದಲ್ಲಿರುವ ಐದು ಸಾವಿರ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ಮಾಡಿ, ಜನರ ಗಮನ ಸೆಳೆಯುತ್ತೇವೆ ಎಂದರು.

ಮನಮೋಹನ್ ಸಿಂಗ್ ಸರ್ಕಾರ ಒಂದು ರೂಪಾಯಿ ಬೆಲೆ ಹೆಚ್ಚಳ ಮಾಡಿದರೂ ಬಿಜೆಪಿಯವರು ಹಾಹಾಕಾರ ಮಾಡುತ್ತಿದ್ದರು. ನರೇಂದ್ರ ಮೋದಿ ಅವರು ಖುದ್ದು ವಿರೋಧ ಮಾಡಿದರು. 2014ರ ಚುನಾವಣೆಯಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಅಚ್ಚೆದಿನ್ ಆಯೇಂಗೆ ಎಂದಿದ್ದರು. ಈಗ ನಗರಕದ ದಿನಗಳು ಬಂದಿವೆ.  ನಾವು ನರಕ ನೋಡಿರಲಿಲ್ಲ. ಬಿಜೆಪಿ ಸರ್ಕಾರ ನರಕ ತೋರಿಸುತ್ತಿದೆ ಎಂದು ಕುಟುಕಿದರು.

ಕೊರೊನಾ ಲಾಕ್ ಡೌನ್ ನಿಂದ ಜೀವನ ನಡೆಸುವುದು ಕಷ್ಟವಾಗಿದೆ.  ಈ ಸಮಯದಲ್ಲಿ  ಸರ್ಕಾರ ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಹೆಚ್ಚಳ ಮಾಡಿವೆ. ಜನ ಜೀವನ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು. ಸರ್ಕಾರ ಜನರಿಗೆ ದಿನ ನಿತ್ಯ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿ ಅವರು ಅಧಿಕಾರದಲ್ಲಿರಲು ನೈತಿಕತೆ ಇಲ್ಲ ಎಂದರು.

ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕಚ್ಚಾ ತೈಲದ ಬೆಲೆ 120 ದಿಂದ 150 ಡಾಲರ್ ಇತ್ತು, ಆಗ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇತ್ತು. ಕೇಂದ್ರ ಸರ್ಕಾರ ಡೀಸೆಲ್ ಮೇಲೆ 3.45 ರೂ. ಪೆಟ್ರೋಲ್ ಮೇಲೆ 9.21 ರೂ. ಅಬಕಾರಿ ತೆರಿಗೆ ವಸೂಲಿ ಮಾಡುತ್ತಿತ್ತು. ಈಗ ಡೀಸೆಲ್ ಮೇಲೆ 31.84 ರೂ. ಪೆಟ್ರೋಲ್ ಮೇಲೆ 31.98 ರೂ. ವಸೂಲಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಶೇ. 24 ಮತ್ತು 31ರಷ್ಟು ಸೆಲ್ಸ್ ಟ್ಯಾಕ್ಸ್ ವಿಧಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50 ರಿಂದ 60 ರೂಪಾಯಿ ತೆರಿಗೆ ವಸೂಲಿ ಮಾಡುತ್ತಿವೆ. ಇಂಧನದ ಮೂಲ ಬೆಲೆ 35 ರೂಪಾಯಿ ಮಾತ್ರ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

 

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top