ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜು ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಇಬ್ಬರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರಿಗೆ ಮತ್ತೆ ಮಣಿ ಹಾಕಲಾಗಿದೆ. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಇಬ್ಬರನ್ನು ಸಿಎಂ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಅಧಿಕಾರಾವಧಿಯಲ್ಲಿ ನೇಮಕಗೊಂಡಿದ್ದ ಕೆಲವು ಹುದ್ದೆಗಳನ್ನು ರದ್ದುಪಡಿಸಲಾಗಿತ್ತು. ಈಗ ಹಂತಹಂತವಾಗಿ ಯಡಿಯೂರಪ್ಪ ಬೆಂಬಲಿಗರಿಗೆ ಸ್ಥಾನ ಕಲ್ಪಿಸಲಾಗುತ್ತಿದೆ.



