Connect with us

Dvgsuddi Kannada | online news portal | Kannada news online

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ, ಜೀವರಾಜು ಮರುನೇಮಕ

ದಾವಣಗೆರೆ

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ, ಜೀವರಾಜು ಮರುನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜು ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಇಬ್ಬರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರಿಗೆ ಮತ್ತೆ ಮಣಿ ಹಾಕಲಾಗಿದೆ.   ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಇಬ್ಬರನ್ನು ಸಿಎಂ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಅಧಿಕಾರಾವಧಿಯಲ್ಲಿ ನೇಮಕಗೊಂಡಿದ್ದ ಕೆಲವು ಹುದ್ದೆಗಳನ್ನು ರದ್ದುಪಡಿಸಲಾಗಿತ್ತು. ಈಗ ಹಂತಹಂತವಾಗಿ ಯಡಿಯೂರಪ್ಪ ಬೆಂಬಲಿಗರಿಗೆ ಸ್ಥಾನ ಕಲ್ಪಿಸಲಾಗುತ್ತಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top