ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಇಂದು ಸಂಪುಟ ವಿಸ್ತರಿಸಿದೆ. ನೂತನ 7 ಶಾಸಕರು ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಅರವಿಂದ ಲಿಂಬಾವಳಿ, ಆರ್.ಶಂಕರ್, ಎಂಟಿಬಿ.ನಾಗರಾಜ್, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೀಶ್ವರ್ ಹಾಗೂ ಉಮೇಶ್ ಕತ್ತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೊದಲು ಆಗಮಿಸಿದಂತ ಶಾಸಕ ಉಮೇಶ್ ಕತ್ತಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅರವಿಂದ ಲಿಂಬಾವಳಿಯವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಎಂ.ಟಿ.ಬಿ.ನಾಗರಾಜ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುರುಗೇಶ್ ನಿರಾಣಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಳಿಕ ಆರ್.ಶಂಕರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಿ.ಪಿ.ಯೋಗೀಶ್ವರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಎಸ್ ಅಂಗಾರ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.



