ಬೆಂಗಳೂರು : ನನ್ನನ್ನು ಸಭಾಪತಿ ಮಾಡಲು ಬಿಜೆಪಿಯ ಸಹಕಾರ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾನಾಡಿದ ಅವರು, ನಾನು ಬಿಜೆಪಿ ಹೈಕಮಾಂಡ್, ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ಶಾಸಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಬಿಜೆಪಿ ಈಗಾಗಲೇ ಅವಿಶ್ವಾಸ ನಿರ್ಣಯ ಪ್ರಸ್ತಾಪ ಸಲ್ಲಿಸಿದೆ. ನಿಯಮದ ಪ್ರಕಾರ 14 ದಿನಗಳಿಗೆ ಮೊದಲು ಅವಿಶ್ವಾಸ ಸಲ್ಲಿಸಬೇಕು. ಆ ಪ್ರಕಾರ ಫೆ.2 ಕ್ಕೆ 14 ದಿನವಾಗಲಿದೆ ಎಂದರು. ಇನ್ನು ಉಪಸಭಾಪತಿ ಚುನಾವಣೆ ಬಳಿಕ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಫೆ. 8 ರವರೆಗೂ ಪರಿಷತ್ ಕಲಾಪವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸಹಕಾರ ನೀಡಲಿದೆ: ಬಸವರಾಜ ಹೊರಟ್ಟಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



