ಮೈಸೂರು : ಸಚಿವ ಸ್ಥಾನಕ್ಕಾಗಿ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಸಿ.ಡಿ ತೋರಿಸಿ ಕೆಲವರು ಮಂತ್ರಿ ಸ್ಥಾನ ಪಡೆದಿದ್ದಾರೆ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. ಹೀಗಾಗಿ ಬ್ಲ್ಯಾಕ್ ಮೇಲ್ ಮಾಡಿದವರು ಯಾರೇ ಆಗಿರಲಿ ಅವರು ವಿರುದ್ಧ ಮುಖ್ಯಮಂತ್ರಿಗಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಅರ್ಥವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾಗಿ ಅಧಿಕಾರ ಚಲಾಯಿಸುತ್ತಿರೋದು ಅವರ ಮಗ. ಬಿಡಿಎ ಹಗರಣದಲ್ಲಿ ಅವರ ಕುಟುಂಬದ ಖಾತೆಗೆ ದುಡ್ಡು ಹೋಗಿದೆ ಎಂದು ಆರೋಪಿಸಿದ್ದಾರೆ.



