ಬೆಂಗಳೂರು : ನಾಳೆಯಿಂದ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 5ರವರೆಗೆ ಅಧಿವೇಶನ ನಡೆಯಲಿದ್ದು, ರಾಜ್ಯ ಸರ್ಕಾರಕ್ಕೆ ಈ ಬಾರಿಯ ಅಧಿವೇಶನ ಭಾರೀ ಸವಾಲಿನದ್ದಾಗಿದೆ. ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇನ್ನೊಂದೆಡೆ ಸಂಪುಟ ವಿಸ್ತರಣೆ, ಖಾತೆಗಳ ಮರು ಹಂಚಿಕೆ, ರೈತರ ಪ್ರತಿಭಟನೆ, ಹುಣಸೋಡು ಸ್ಫೋಟ, ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಇತರ ವಿಷಯದ ಆಧಾರ ಮೇಲೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳಲು ಸಜ್ಜಾವೆ. ಇದಕ್ಕೆ ತಿರುಗೇಟು ನೀಡಲು ರಾಜ್ಯ ಸರ್ಕಾರ ಕೂಡ ಕಾರ್ಯತಂತ್ರ ರೂಪಿಸುತ್ತಿದೆ. ತೆಂಗು ಬೆಳೆಗಾರಿಗೆ ಗುಡ್ ನ್ಯೂಸ್: ಕೊಬ್ಬರಿಗೆ 375 ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ
ಇದರ ಮಧ್ಯೆ ಗೋಹತ್ಯೆ ನಿಷೇಧ ಕಾಯ್ದೆಯ ಮಸೂದೆಯನ್ನು ಪ್ರಸಕ್ತ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಕಾಯ್ದೆಯ ಬಗ್ಗೆ ಕಾಂಗ್ರೆಸ್ ಈಗಾಗಲೇ ವಿರೋಧ ವ್ಯಕ್ತ ಪಡಿಸಿದ್ದರೇ, ಜೆಡಿಎಸ್ ನಡೆ ಕುತೂಹಲ ಮೂಡಿಸಿದೆ. ಗೋಹತ್ಯೆ ನಿಷೇಧವನ್ನು ರಾಜ್ಯ ಸರ್ಕಾರ ಈಗಾಗಲೇ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ.
ವಿಧಾನ ಮಂಡಲದ ಅಧಿಶೇಶನದ ಹಿನ್ನಲೆಯಲ್ಲಿ ವಿಧಾನಸೌಧದದ ಸುತ್ತ-ಮುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ವಿಧಾನಸೌಧದ ಸುತ್ತ ಫೆಬ್ರವರಿ 5ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂಬುದಾಗಿ ತಿಳಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು
ವಿಧಾನಪರಿಷತ್‌ನ ಉಪ ಸಭಾಪತಿ ಚುನಾವಣೆಯೂ ನಿಗದಿಯಾಗಿದೆ. ವಿಧಾನಪರಿಷತ್‌ನಲ್ಲಿ ನಡೆದ ಕಹಿ ವಿದ್ಯಮಾನಗಳ ಕುರಿತು ಸದನ ಸಮಿತಿ ವರದಿ ಸಲ್ಲಿಸಿದೆ. ವರದಿ ಮಂಡನೆಯಾದರೆ ಪರಿಷತ್‌ನಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಬಹುದು.



