ಬೆಂಗಳೂರು: ನಿನ್ನೆ (ಬುಧವಾರ) ಸಂಜೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಮುಂಗಾರು ಪೂರ್ವ ಮಳೆಯಾಗಿದ್ದು, ಈ ಮಳೆ ನಾಳೆಯವರೆಗೂ (ಏ.16) ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ.
ಈ ಬಗ್ಗೆ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಓಡಿದ್ದು, ಇಂದು ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಹಾಗೂ ಕರಾವಳಿ ಭಾಗದಲ್ಲೂ ಮಳೆಯಾಗಿದೆ. ಹವಾಮಾನದಲ್ಲಿ ಉಂಟಾಗುವ ಬದಲಾವಣೆ, ವಾಯುಭಾರ ಕುಸಿತದಿಂದ ಬೇಸಿಗೆಯಲ್ಲಿ ಪೂರ್ವ ಮುಂಗಾರು ಮಳೆಯಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಿನ್ನೆಯಿಂದಲೂ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಹಗರುದಿಂದ ಸಾಧಾರಣ ಮಳೆಯಾಗಿದ್ದರೆ, ಇನ್ನು ಕೆಲವೆಡೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ,.



