ಬೆಂಗಳೂರು: ರಾಜ್ಯಕ್ಕೆ ಅಕ್ಟೋಬರ್ 21 ರಿಂದ ಹಿಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಗಿದಿದ್ದು, ಕಳೆದ 15 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನು ಅಕ್ಟೋಬರ್ 21 ರಿಂದ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಪಡೆಯಲಿದೆ.
ಅಕ್ಟೋಬರ್ 23 ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.



