Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಬೆಂಗಳೂರು:  ರಾಜ್ಯದಲ್ಲಿಇನ್ನೂ ಮೂರು ದಿನ ಭಾರೀ ಮಳೆ ಆಗಲಿದೆ.  ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿಂದು ಆರಂಜ್ ಅಲರ್ಟ್ ಘೋಷಿಸಲಾಗಿದೆ ಎಂದು  ಭಾರತದ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಈ ಮುಂಗಾರು ಮಳೆ ಆಗಸ್ಟ್ 6ರವರೆಗೆ ಮುಂದುವರೆಗೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ

ಇಂದಿನಿಂದ (ಆ. 3) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top