ಬೆಂಗಳೂರು: ಯುವತಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ ಮಾಡಿದ್ದರಾರೆ ಎಂಬ ಆರೋಪಿಸಿ ಸಿಡಿ ಬಿಡುಗಡೆಯಾದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ರಾಜೀನಾಮೆ ಪತ್ರವನ್ನು ಯಡಿಯೂರಪ್ಪ ಅವರು ಅಂಗೀಕರಿಸಿದ್ದು, ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಪತ್ರ ರವಾನೆಯಾಗಿದೆ. ಹಲವು ರಾಜ್ಯಗಳ ಚುನಾವಣೆ, ವಿಧಾನಸಭೆ ಅಧಿವೇಶನ ಹಿನ್ನೆಲೆ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಪಡೆಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿತ್ತು.
ಸಚಿವ ಯುವತಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಕೆ ಜೊತೆ ದೌರ್ಜನ್ಯ ಎಸೆಗಿದ್ದಾರೆ ಎಂದು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಸಿಡಿ ಪ್ರಕರಣ ಹೊರಬರುತ್ತಿದ್ದಂತೆ ವಿರೋಧ ಪಕ್ಷ ಕಾಂಗ್ರೆಸ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿತ್ತು. ರಾಜೀನಾಮೆಗೆ ಆಗ್ರಹಿಸಿ ಎಲ್ಲಡೆ ಪ್ರತಿಭಟನೆ ನಡೆದಿದ್ದವು.
ಎಲ್ಲ ಕಡೆಗೆ ಒತ್ತಡಕ್ಕೆ ಮಣಿಸು ರಾಜೀನಾಮೆ ನೀಡಿದ ಸಚಿವ ರಾಮೇಶ್ ಜಾರಕಿ ಹೊಳಿ, ನನ್ನ ಮೇಲೆ ಬಂದಿರು ಆರೋಪ ಸತ್ಯಕ್ಕೆ ದೂರುವಾಗಿದ್ದು, ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ನಾನು ನಿರ್ದೋಷಿ ಎಂದು ವಿಶ್ವಾಸವಿದ್ದರೂ, ನೈತಿಕ ಹೊಣೆ ಹೊತ್ತು ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.




