ದಾವಣಗೆರೆ: 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮವದಡಿ ರಾಜ್ಯ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು https://ssp.postmatric.karnataka.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯ ದಿನವಾಗಿರುತ್ತದೆ.
ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. 2004ರವರೆಗೆ ಎಸ್.ಎಸ್.ಎಲ್.ಸಿ /10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. 2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪಿಯುಸಿ/ಪದವಿ/ಇತರೆ ಕೋರ್ಸ್‍ಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. ಹೊರ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. ಸ್ಟ್ಯಾಂಡ್ ಅಲೋನ್ ಇನ್ಸ್ಟಿಟ್ಯೂಟ್ಸ್ ( Stand Alone Institutes) ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಇ-ದೃಢೀಕರಣಾ ಪೋರ್ಟಲ್‍ನಲ್ಲಿ ಅರ್ಜಿದಾರರ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಇ-ದೃಢೀಕರಣಾ ಅಧಿಕಾರಿಯಾಗಿರುತ್ತಾರೆ. ಅದರಂತೆ ಇ-ದೃಢೀಕರಣಾ ಪೋರ್ಟಲ್‍ನಲ್ಲಿ ತಮ್ಮ ದಾಖಲಾತಿಗಳನ್ನು ಸಲ್ಲಿಸಿ, ಇ-ದೃಢೀಕರಣಾಧಿಕಾರಿಯಾದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.