ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳು ಆರಂಭಾಗಿಲ್ಲ. ಸರ್ಕಾರ ಮತ್ತೆ ವಿದ್ಯಾಗಮ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದ್ದು,ಈ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅನುಸರಿಸಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ನಾಡಿನ ಗ್ರಾಮೀಣ ಮಕ್ಕಳ ಹಿತ ಮನದಲ್ಲಿಟ್ಟುಕೊಂಡು ಇಲಾಖೆ ವಿದ್ಯಾಗಮ ಕಾರ್ಯಕ್ರಮ ರೂಪಿಸಿತ್ತು. ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅನುಸರಿಸಬಹುದು. ಇನ್ನು ರಾಜ್ಯದ ಎಲ್ಲಾ ಮಾಧ್ಯಮಗಳು ವಿದ್ಯಾಗಮ ಕಾರ್ಯಕ್ರಮವನ್ನು ಸ್ವಾಗತಿಸಿವೆ ಹಾಗೂ ಕೆಲವು ಸಲಹೆಗಳನ್ನು ನೀಡಿವೆ.