ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಇಂದು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಪಲ್ಟಿಯಾಗಿ 8 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಇಂದು ಬೆಳಗ್ಗೆ 9 ಗಂಟೆಗೆ ಅಪಘಾತವಾಗಿದೆ. ಬಸ್ ನಲ್ಲಿ ಹೆಚ್ಚಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದು, ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಡಿವೈಡರ್ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಸ್ಥಳದಲ್ಲೇ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಉಳಿದ ಇಬ್ಬರು ಆಸ್ಪತ್ರಗೆ ಸಾಗಿಸುವಾಗ ಮೃತಪಟ್ಟಿದ್ಧಾರೆ. ಇನ್ನು 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ.
ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಪೋಷಕರ ಗೋಳಾಟ ಮುಗಿಲು ಮುಟ್ಟಿದೆ. ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ



