ಬೆಂಗಳೂರು: ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು, ಫೆ.13ರ ಬಳಿಕ ಚಳಿ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುತ್ತಿದ್ದು, ಒಣಹವೆ ವಾತಾವರಣ ಮುಂದುವರೆದಿದೆ.
ರಾಜ್ಯಾದ್ಯಂತ ಫೆ.13ರವರೆಗೂ ಹಗಲು ಒಣಹವೆ ಹಾಗೂ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ ಸ್ವಲ್ಪ ಚಳಿ ಮುಂದುವರೆಯಲಿದೆ. ಫೆ.13ರ ಬಳಿಕ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ವಾಡಿಕೆ ಪ್ರಮಾಣದ ತಾಪಮಾನ ದಾಖಲಾಗಲಿದೆ. ಈಗಿರುವ ಚಳಿ ದೂರವಾಗಲಿದೆ.
ಬೀದರ್ ನಲ್ಲಿ ರಾಜ್ಯದ ಕನಿಷ್ಠ ಉಷ್ಣಾಂಶ 7.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರಿಂದ ಆ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸ್ವಲ್ಪ ಚಳಿಯ ವಾತಾವರಣವಿರಲಿದೆ. ಹಾಸನದಲ್ಲಿ 10.4 ಡಿಗ್ರಿ ಸೆಲ್ಸಿಯಸ್, ಧಾರವಾಡ 11, ವಿಜಯಪುರ 11.5, ಹಾವೇರಿ 13, ಗದಗ 13.6 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
.



