Connect with us

Dvgsuddi Kannada | online news portal | Kannada news online

ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಬಲೆಗೆ  ಬಿದ್ದ ಗುರುಮಠಕಲ್ ತಹಶೀಲ್ದಾರ್…!

ಪ್ರಮುಖ ಸುದ್ದಿ

ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಬಲೆಗೆ  ಬಿದ್ದ ಗುರುಮಠಕಲ್ ತಹಶೀಲ್ದಾರ್…!

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದಾಗಲೇ  ತಹಶೀಲ್ದಾರ್ ಸಂಗಮೇಶ ಜಿಡಗಾರನ್ನು ವಶಕ್ಕೆ ಪಡೆಯಲಾಗಿದೆ.

ಜಮೀನು ಪಾಲು ಮಾಡುವುದಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಅವರಿಂದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆದಿದೆ.  ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ, ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top