ಬೆಂಗಳೂರು: ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ತಮ್ಮ ತಮ್ಮ ಊರುಗಳಿಗೆ ತೆರಳು ಪ್ರಯಾಣಿಕರ ಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಂದು ಸಾವಿರ ಹೆಚ್ಚುವರಿ ಬಿಡಲು ನಿರ್ಧಾರ ಕೈಗೊಂಡಿದೆ.
ಹಬ್ಬಗಳಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುತ್ತದೆ. ಈ ಹಿನ್ನೆಲೆ ದಸರಾ, ದೀಪಾವಳಿ ಹಬ್ಬಕ್ಕೆ ತಲಾ 1 ಸಾವಿರ ಬಸ್ ಬಿಡಲು ಕೆಎಸ್ ಆರ್ ಟಿಸಿ ತೀರ್ಮಾನಿಸಿದೆ. ದಸರಾ ಅವಧಿಯಲ್ಲಿ ಅಕ್ಟೋಬರ್ 13ರಿಂದ 21 ರವರೆಗೆ ಮತ್ತು ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 7ರ ವರೆಗೆ ಈ ವಿಶೇಷ ಬಸ್ ಸಂಚರಿಸಲಿವೆ.
ಹೆಚ್ಚುವರಿ ಬಸ್‌ಗಳು ಬೆಂಗಳೂರಿನಿಂದ ರಾಜ್ಯದೊಳಗಿನ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ ಬೀದರ್ ಮುಂತಾದ ಸ್ಥಳಗಳಿಗೆ ತೆರಳುತ್ತವೆ. ಇದಲ್ಲದೆ ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೂ ಬಸ್‌ಗಳ ಸಂಚಾರ ಇರಲಿದೆ.
ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ಸಂಚಾರ ಇದ್ದರೂ ದರದಲ್ಲಿ ಯಾವುದೇ ಹೆಚ್ಚಳ ಇಲ್ಲ. ನಿಗಮದ ವೆಬ್‌ಸೈಟ್ www.ksrtc.karnataka.gov.in ಮುಂಗಡ ಆಸನಗಳನ್ನು ಕಾಯ್ದಿರಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.



