ಡಿವಿಜಿ ಸುದ್ದಿ,ಬೆಂಗಳೂರು: ರೈತ ವಿರೋಧಿ ಮಸೂದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದು, 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಎರ್‍ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ರೈಲ್ ಸ್ಟೇಷನ್ ಮುತ್ತಿಗೆಗೆ ಯತ್ನಿಸಿದ್ದಾರೆ. ಆಗ ಫ್ಲಾಟ್ ಫಾರಂಗೆ ಬಿಡದೆ ಎಲ್ಲಾ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೇ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ.ನಾರಾಯಣಗೌಡ ಸೇರಿದಂತೆ ರೈಲ್ವೆ ನಿಲ್ದಾಣದಲ್ಲಿ ಕರವೇ ಕಾರ್ಯಕರ್ತರ ಪೊಲೀಸರು ಬಂಧಿಸಿದ್ದಾರೆ.
ಅರೆಸ್ಟ್ ಆಗಿದ್ದ ಕರವೇ ಕಾರ್ಯಕರ್ತರು ಬಸ್ಸಿನಿಂದ ಕೆಳಗಿಳಿದು ಆನಂದ್ ರಾವ್ ಫೈ ಓವರ್ ಮೇಲೆ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಆಗ ಮತ್ತೆ ಕಾರ್ಯಕರ್ತರನ್ನು ಬಸ್ಸಿಗೆ ತುಂಬಿ ಪೊಲೀಸರು ಕಳುಹಿಸಿದ್ದಾರೆ.