ಶಿವಮೊಗ್ಗ: ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗೆ ನೀರು ಹರಿಸುವ ಕುರಿತು ಚರ್ಚಿಸಲು ಜ.2ರಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ.
ದಾವಣಗೆರೆ: ಮತ್ತೆ ಅಡಿಕೆಗೆ ಭರ್ಜರಿ ಬೆಲೆ; ಕೇವಲ 10 ದಿನದಲ್ಲಿ 3 ಸಾವಿರ ಏರಿಕೆ
ಜ.2ರಂದು ಬೆಳಗ್ಗೆ 9.00 ಕ್ಕೆ ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ಸಭೆ ನಡೆಯಲಿದೆ.
ದಾವಣಗೆರೆ: ಡ್ರಗ್ಸ್ ಕೇಸ್ ನಲ್ಲಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅರೆಸ್ಟ್ ; ಸಚಿವ ಜಮೀರ್ ಆಪ್ತ ಬಂಧನ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ 88ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವತಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



