ನವದೆಹಲಿ: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.
ರಾಜ್ಯ ವಿಧಾನ ಸಭೆ ಚುನಾವಣೆ ಬಳಿಕ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ. ಶಿಕಾರಿಪುರ ಶಾಸಕ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಮುಗಿದರೂ ಈ ಸ್ಥಾನಕ್ಕೆ ಹೊಸ ನೇಮಕಾತಿ ಆಗಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಹೊಸ ನೇಮಕಾತಿಯತ್ತ ಬಿಜೆಪಿ ವರಿಷ್ಠರು ಮನ ಮಾಡಿರಲಿಲ್ಲ. ಇದೀಗ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಿಸಲಾಗಿದೆ.



