ವಿಜಯನಗರ: ನೂತನ ವಿಜಯನಗರ ಜಿಲ್ಲೆಗೆ ಬಳ್ಳಾರಿ ಜಿಲ್ಲೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ.
ನೂತನ ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲು ಕಾಲಾವಕಾಶ ಬೇಕಾಗಿರುತ್ತದೆ. ನೂತನ ಜಿಲ್ಲೆಯ ಪೂರ್ವಸಿದ್ಧತೆಗಾಗಿ ಬಳ್ಳಾರಿಯ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರ ವಹಿಸಲಾಗಿದೆ. ಫೆ. 8ರಿಂದ ಜಾರಿಗೆ ಬರುವಂತೆ ಎಲ್ಲ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.



