ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ 1ರಿಂದ 9ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ ರಾಜ್ಯ ಸರಕಾರ ಮಹತ್ವದ ಘೋಷಣೆ ಹೊರಡಿಸಿದೆ.
ಕೇಂದ್ರ ಸರಕಾರ ಸಿಬಿಎಸ್ ಇ ಮತ್ತು ಐಎಸ್ ಸಿಇ ಪರೀಕ್ಷೆಗಳನ್ನು ರದ್ದುಗೊಳಿಸಿದ ನಂತರ, ರಾಜ್ಯ ಸರಕಾರ 1ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಪಾಸ್ ಮಾಡುವಂತೆ ಸೂಚಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಕೊರೊನಾ ಎರಡನೇ ಅಲೆ ಸ್ಫೋಟ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಲಾಗಿದೆ. 6 ರಿಂದ 9ನೇ ತರಗತಿಗಳಿಗೆ ಮೌಲ್ಯಂಕನ ಪರೀಕ್ಷೆ ನಡೆಸುವಂತೆ ಶಿಕ್ಷಣ ತಜ್ಞರು ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದರು. ಮೇ 1 ರಿಂದ ಜೂ.14 ವರೆಗೆ ಬೇಸಿಗೆ ರಜೆ ಕೂಡ ಘೋಷಿಸಲಾಗಿದ್ದು, ಜುಲೈ 1ರಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.



