ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರ ಬಹಳ ದಿನದ ಈಡೇರಿಸಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1ರಿಂದಲೇ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವ ನಿರ್ಣಯ ಕೈಗೊಳ್ಳಲಾಗಿದೆ.
ಸರ್ಕಾರಿ ನೌಕರರ ಬೇಡಿಕೆಯನ್ನು ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದ್ದು, ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇಕಡ 27.5ರಷ್ಟು ಹೆಚ್ಚಳವಾಗಲಿದೆ.
ಶೇಕಡ 27.5ರಷ್ಟು ವೇತನ ಪರಿಷ್ಕರಣೆ ಮಾಡುವಂತೆ ಮಾರ್ಚ್ 16ರಂದು ಕೆ.ಸುಧಾಕರ್ ರಾವ್ ನೇತೃತ್ವದಲ್ಲಿ ರಾಜ್ಯ 7ನೇ ವೇತನ ಆಯೋಗ ಸಿಎಂ ಸಿದ್ದರಾಮಯ್ಯನವರಿಗೆ ವರದಿ ನೀಡಿತ್ತು. ಸಿಎಂ ಈ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.



