ಬೆಂಗಳೂರು: 2 ಲಕ್ಷ ಲಂಚ ಸ್ವೀಕರಿಸುವಾಗ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ. ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಪ್ರಕರಣ ದಾಖಲಿಸಿದೆ.
ನಗರದ ನಿವಾಸಿಯೊಬ್ಬರ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿದ್ದು, 2 ಲಕ್ಷ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇನ್ಸ್ ಪೆಕ್ಟರ್ ರಾಘವೇಂದ್ರ ಖಾಸಗಿ ವ್ಯಕ್ತಿಯ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ