Connect with us

Dvgsuddi Kannada | online news portal | Kannada news online

ಎಸಿಬಿ ದಾಳಿ: 68 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಇಬ್ಬರು ಅಧಿಕಾರಿಗಳು

ಕ್ರೈಂ ಸುದ್ದಿ

ಎಸಿಬಿ ದಾಳಿ: 68 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಇಬ್ಬರು ಅಧಿಕಾರಿಗಳು

ಬೆಳಗಾವಿ: ಗುತ್ತಿಗೆದಾರರೊಬ್ಬರಿಂದ 68 ಸಾವಿರ ಲಂಚ ಸ್ವೀಕರಿಸುವಾಗ ಇಬ್ಬರು ಅಧಿಕಾರಿಗಳಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಥಣಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಇಂದ್ರಪ್ಪ ಹಾಗೂ ಕಚೇರಿಯ ವ್ಯವಸ್ಥಾಪಕ ದೀಪಕ ಕೃಷ್ಣಾಜಿ ಕುಲಕರ್ಣಿಯನ್ನು  ಎಸಿಬಿ ವಶಕ್ಕೆ ಪಡೆದಿದೆ.  ಜಲಜೀವನ ಮಿಷನ್ ಯೋಜನೆಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರಿಂದ ಈ ಅಧಿಕಾರಿಗಳು ಶೇ.3ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ಈ  ದೂರು ಆಧಾರಿಸಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top