ಕೊಲ್ಲೂರು: ಸಿಗಂಧೂರಿನಿಂದ ಕೊಲ್ಲೂರಿಗೆ ಪ್ರಯಾಣಿಸುವಾಗ ಯಾತ್ರಾರ್ಥಿಗಳಿದ್ದ ಖಾಸಗಿ ಬಸ್ಸೊಂದು ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಿಂದಾಗಿ 22ಕ್ಕೂ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. 22 ಮಂದಿಯ ಪೈಕಿ ಸಂಕ್ರಪ್ಪ (50), ರೂಪಾ (35),
ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43) ಅವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಮಹಿಳೆಯರ ಕೈ ತುಂಡಾಗಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ. ಮತ್ತೊಬ್ಬರ ಪಕ್ಕೆಲುಬು ಮುರಿದಿದೆ ಕೋಲಾರದ ಮುಳುಬಾಗಿಲು ಮೂಲದವರಾಗಿದ್ದಾರೆ. ಕೊಲ್ಲೂರು ಪೊಲೀಸರು ಸ್ಥಳೀಯರೊಂದಿಗೆ ಸೇರಿ ಜೆಸಿಬಿ ಮೂಲಕ ಬಸ್ ಮೇಲೆತ್ತಿದ್ದಾರೆ.



