Connect with us

Dvgsuddi Kannada | online news portal | Kannada news online

ಬಸ್- ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲಿ ಇಬ್ಬರು ಸಾವು:10ಕ್ಕೂ ಹೆಚ್ಚು ಮಂದಿಗೆ ಗಾಯ

IMG 20220620 094530

ಪ್ರಮುಖ ಸುದ್ದಿ

ಬಸ್- ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲಿ ಇಬ್ಬರು ಸಾವು:10ಕ್ಕೂ ಹೆಚ್ಚು ಮಂದಿಗೆ ಗಾಯ

ತುಮಕೂರು: ಇಂದು ಬೆಳ್ಳಂಬೆಳಗ್ಗೆ ಕೆಎಸ್‌ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಘಟನೆ ನಡೆದಿದೆ. ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಿರೀಶ್​ (37), ಮಾನ್ಯ (17), ಮೃತಪಟ್ಟವರಾಗಿದ್ದಾರೆ.
ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಕಾರು ಬರುತ್ತಿತ್ತು. ಮತ್ತೊಂದಡೆ‌ ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಗಾಯಾಳುಗಳನ್ನ ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top