Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ ಅಮೃತ‌ ಮಹೋತ್ಸವಕ್ಕೆ ಆಗಮಿಸುತ್ತಿದ್ದ ಕಾರು ಪಲ್ಟಿಯಾಗಿ ಓರ್ವ ಸಾವು

ಪ್ರಮುಖ ಸುದ್ದಿ

ಸಿದ್ದರಾಮಯ್ಯ ಅಮೃತ‌ ಮಹೋತ್ಸವಕ್ಕೆ ಆಗಮಿಸುತ್ತಿದ್ದ ಕಾರು ಪಲ್ಟಿಯಾಗಿ ಓರ್ವ ಸಾವು

ಬಾಗಲಕೋಟೆ: ದಾವಣಗೆರೆಯಲ್ಲಿ ನಾಳೆ (ಆ. 03) ನಡೆಯಲಿರೋ ಸಿದ್ದಾರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್‌ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ.

ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭೇಟಿ ನೀಡ್ತಿದ್ದಾರೆ.

ಇನ್ನು ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top