Connect with us

Dvgsuddi Kannada | online news portal | Kannada news online

ಬೆಂಬಲ ಬೆಲೆ ಯೋಜನೆಯಡಿ ಏ.1ರಿಂದ ಬಿಳಿ, ಹೈಬ್ರಿಡ್ ಜೋಳ ಖರೀದಿ ಶುರು; ದರ ಎಷ್ಟು …? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಮುಖ ಸುದ್ದಿ

ಬೆಂಬಲ ಬೆಲೆ ಯೋಜನೆಯಡಿ ಏ.1ರಿಂದ ಬಿಳಿ, ಹೈಬ್ರಿಡ್ ಜೋಳ ಖರೀದಿ ಶುರು; ದರ ಎಷ್ಟು …? ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿ: ಹೈಬ್ರಿಡ್, ಬಿಳಿ ಜೋಳ ಬೆಳೆದ ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. 2023-24ನೇ ಸಾಲಿನ ಋತುವಿನಲ್ಲಿ ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡಲಾಗುತ್ತದೆ. ಇದಕ್ಕಾಗಿ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದೆ.

ರೈತರಿಂದ ನೇರವಾಗಿ ಬಿಳಿ ಜೋಳ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ತೀರ್ಮಾನಿಸಿದ್ದು, ಎಫ್.ಎ.ಕ್ಯೂ. ಗುಣಮಟ್ಟದ ಜೋಳವನ್ನು ರೈತರಿಂದ ಖರೀದಿಸಲಿದೆ. ರಾಜ್ಯ ಸರ್ಕಾರವು 1 ಲಕ್ಷ ಮೆಟ್ರಿಕ್ ಟನ್ ಗುರಿಯನ್ನು ತಲುಪುವ ತನಕ ಖರೀದಿಸಲು ಸೂಚಿಸಿದ್ದರಿಂದ ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಬಳ್ಳಾರಿ ಡಿಸಿ ಕರೆ ನೀಡಿದ್ದಾರೆ.

ರೈತರಿಂದ ಬಿಳಿ ಜೋಳ ಖರೀದಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಮಾಲ್ದಂಡಿ ಬಿಳಿ ಜೋಳಕ್ಕೆ ರೂ.3,225 (ಪ್ರತಿ ಕ್ವಿಂಟಾಲ್‍ಗೆ) ಮತ್ತು ಹೈಬ್ರಿಡ್ ಬಿಳಿ ಜೋಳಕ್ಕೆ ರೂ. 3,180 (ಪ್ರತಿ ಕ್ವಿಂಟಾಲ್‍ಗೆ) ಬೆಲೆ ನಿಗದಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು. ಇವರು ಖರೀದಿಸುವ ಏಜೆನ್ಸಿಯಾಗಿರುತ್ತಾರೆ. ಹಿಂಗಾರು ಋತುವಿನ ರೈತರ ನೋಂದಣಿ ಪ್ರಾರಂಭವಾಗಿದೆ. ಹಿಂಗಾರು ಋತುವಿನ ಖರೀದಿ ಪ್ರಾರಂಭ ಮತ್ತು ಮುಕ್ತಾಯದ ದಿನವು ಏಪ್ರಿಲ್ 1 ರಿಂದ ಮೇ 31ರ ವರೆಗೆ ಇರುತ್ತದೆ.

ಬಳ್ಳಾರಿ ಜಿಲ್ಲೆಯಲ್ಲಿ ತೆರೆದಿರುವ ಖರೀದಿ ಕೇಂದ್ರದ ಬಗ್ಗೆ ಮಾಹಿತಿಗಾಗಿ ಬಳ್ಳಾರಿ ತಾಲ್ಲೂಕಿನ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಬಳ್ಳಾರಿ ಘಟಕ-1&2 ರ ನರಸಿಂಹ ಅವರನ್ನು 9900677875, ಕಂಪ್ಲಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ರಂಗಪ್ಪ ಅವರನ್ನು 9740838910 ಸಂಖ್ಯೆ ಮೂಲಕ ಸಂಪರ್ಕಿಸಬಹುದು.

ಸಿರುಗುಪ್ಪದ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮೋಹನ ಕುಮಾರ ಅವರನ್ನು 9731421918, ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಎ.ಪಿ.ಎಮ್.ಸಿಯ ಹುಸೇನ್ ಸಾಹೆಬ್ ಅವರನ್ನು 8951307333, ಸಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಎ.ಪಿ.ಎಮ್.ಸಿಯ ಶಿವಲಿಂಗಪ್ಪ ಅವರನ್ನು 9945940350 ಸಂಖ್ಯೆ ಮೂಲಕ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

ರೈತರಿಂದ ಬಿಳಿ ಜೋಳ ಖರೀದಿ ಮಾಡಲು ಷರತ್ತುಗಳನ್ನು ಸಹ ವಿಧಿಸಲಾಗಿದೆ. ಹೆಸರು ನೋಂದಣಿ ಮಾಡುವ ರೈತರು ಸ್ವತಃ ಖರೀದಿ ಕೇಂದ್ರಗಳಿಗೆ ಬಂದು ಬಯೋಮೆಟ್ರಿಕ್ ಮುಖಾಂತರ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಬಿಳಿ ಜೋಳ ನೋಂದಾಯಿಸಿಕೊಂಡ ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಾಲ್‍ನಂತೆ ರೈತನ ಜಮೀನಿಗನುಗುಣವಾಗಿ ಬಿಳಿ ಜೋಳವನ್ನು ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ರೈತರಿಗೆ ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಐಡಿಯನ್ನು (ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ನೋಂದಣಿ ಅಥವಾ ಖರೀದಿ ಕೇಂದ್ರಕ್ಕೆ ತಂದು ಬೆಂಬಲ ಬೆಲೆ ಯೋಜನೆಯಡಿ ಜೋಳ ಮಾರಾಟ ಮಾಡಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ರೈತರು ಸರಬರಾಜು ಮಾಡುವ ಜೋಳ ಗುಣಮಟ್ಟವನ್ನು ಕೃಷಿ ಇಲಾಖೆಯು ನಿಯೋಜಿಸಿದ ಗುಣಮಟ್ಟ ಪರಿವೀಕ್ಷಕರು ಪರಿಶೀಲಿಸಿ ದೃಢೀಕರಿಸಿದ ನಂತರವೇ ಜೋಳ ಖರೀದಿಸಲಾಗುವುದು. ರೈತರು ತಮ್ಮ ಸ್ವಂತ ಖರ್ಚಿನಲ್ಲಿ ನಿಗದಿಪಡಿಸಿದ ಖರೀದಿ ಕೇಂದ್ರಕ್ಕೆ ಬಿಳಿ ಜೋಳ ಉತ್ಪನ್ನಗಳನ್ನು ಸರಬರಾಜು ಮಾಡಬೇಕು. ರೈತರಿಂದ ಖರೀದಿಸುವ ಜೋಳ ಸರಕಿನ ಮೌಲ್ಯವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುತ್ತದೆ.

ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳು ಖರೀದಿ ಕೇಂದ್ರಗಳಿಗೆ ಜೋಳ ತಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ಕಚೇರಿಯ ಜಿಲ್ಲಾ ವ್ಯವಸ್ಥಾಪಕ ಆಶಿಕ್ ಅಲಿ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9686935278.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top