ಮೂಡುಬಿದರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಶೈಕ್ಷಣಿಕ ವರ್ಷ 2026-27 ಸಾಲಿನ 6, 7, 8 ಮತ್ತು 9ನೇ ತರಗತಿಗಳಿಗೆ ಉಚಿತ ಶಿಕ್ಷಣ ಸೌಲಭ್ಯ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಶಾಲಾ ವೆಬ್ ಸೈಟ್ www.alvasschools.com ಅರ್ಜಿ ಲಿಂಕ್
ಲಲಭ್ಯವಿರುತ್ತದೆ.ಅಲ್ಲಿರುವ ಸೂಚನೆಗಳನ್ನು ಓದಿಕೊಂಡು ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2026 ಆಗಿರುತ್ತದೆ ಎಂದು ಸಂಸ್ಥೆ ಮುಖ್ಯಸ್ಥರಾದ ಡಾ| ಎಂ. ಮೋಹನ ಆಳ್ವ ತಿಳಿಸಿದ್ದಾರೆ.
ಆಯ್ಕೆ ನಡೆಯುವ ಸ್ಥಳ, ದಿನಾಂಕ
01 ಮಾರ್ಚ್ 2026ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣನಡೆಯಲಿದೆ. ಈ ಶಾಲೆ ಸಂಪೂರ್ಣ ಉಚಿತ ಶಿಕ್ಷಣ, ವಸತಿ ಹಾಗೂ ಊಟೋಪಚಾರಗಳ ಸೌಲಭ್ಯ ದೊರಕಲಿದೆ.
ಹೆಚ್ವಿನ ಮಾಹಿತಿಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ), ಮೂಡುಬಿದಿರೆ, ದ.ಕ.-574227. ವಿವರಗಳಿಗೆ 7026530137, 7026530263 ಸಂಪರ್ಕಿಸಿ.



