ಬೆಂಗಳೂರು: ಮಾ.8ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಇಂತಹ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಎಷ್ಟು ಸಾಧ್ಯವೋ ಅಷ್ಟು ಈಡೇರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ನಗರದ ಫ್ರೀಡಂ ಪಾರ್ಕ್ ನಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಅದಷ್ಟು ಈಡೇರಿಸಲಾಗುತ್ತದೆ ಎಂಬುದಾಗಿ ಭರವಸೆ ನೀಡಿದರು.



